Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಮ್ಮನ್ನು ನಾವೇ ಮತ್ತೆ ಹೊಗಳಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡೆದುಕೊಳ್ಳಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾವೀಗ ಆತ್ಮಸ್ತುತಿಯನ್ನು ಮಾಡಲು ಆರಂಭಿಸಿದಂತೆ ತೋರುತ್ತದೆಯೇ? ಅಥವಾ ನಿಮಗೆ ತೋರಿಸಲು ಯೋಗ್ಯತಾಪತ್ರ ಇತರರಿಗೆ ಬೇಕಾಗಿರುವಂತೆ ನಮಗೂ ಬೇಕಾಗಿದೆಯೇ? ಇಲ್ಲವೆ, ಯೋಗ್ಯತಾಪತ್ರವನ್ನು ನಿಮ್ಮಿಂದ ಪಡೆಯುವ ಅವಶ್ಯಕತೆ ನಮಗೂ ಇದೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾವೇ ನಮ್ಮನ್ನು ತಿರಿಗಿ ಹೊಗಳಿಕೊಳ್ಳುವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿವ್ಮಿುಂದ ಪಡಕೊಳ್ಳಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾವು ನಮ್ಮ ವಿಷಯವಾಗಿ ಮತ್ತೆ ಹೊಗಳಿಕೊಳ್ಳಲು ಆರಂಭಿಸಿದ್ದೇವೆಯೇ? ಇತರ ಕೆಲವು ಜನರಿಗೆ ಬೇಕಾಗುವಂತೆ ನಿಮ್ಮ ಬಳಿಗೆ ಬರಲು ನನಗೆ ಯೋಗ್ಯತಾಪತ್ರಗಳನ್ನು ತೆಗೆದು ಕೊಳ್ಳಬೇಕಾಗಿದೆಯೋ? ಅಥವಾ ಬೇರೆಡೆಗೆ ಹೋಗುವಾಗ ನಿಮ್ಮಿಂದ ಯೋಗ್ಯತಾ ಪತ್ರಗಳನ್ನು ತೆಗೆದುಕೊಳ್ಳಬೇಕಾಗಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಮ್ಮನ್ನು ನಾವೇ ತಿರುಗಿ ಶಿಫಾರಸ್ಸು ಮಾಡಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಬೇರೆಯವರಂತೆ ನಿಮಗೆ ತೋರಿಸುವುದಕ್ಕೆ ಯೋಗ್ಯತಾಪತ್ರವು ಬೇಕೋ ಅಥವಾ ನಿಮ್ಮಿಂದ ನಮಗೆ ಯೋಗ್ಯತಾಪತ್ರವು ಬೇಕಾಗಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆ ಹೊಲ್ಯಾರ್ ಅಮಿ ಕಾಯ್ ಅನಿಬಿ ಅಮ್ಚೆಚ್ ಮೊಟೆಪಾನ್ ಬೊಲುಕ್ ಬಗುಲಾವ್ ಕಾಯ್? ತುಮ್ಕಾ ದಾಕ್ವುಕ್, ನಾಹೊಲ್ಯಾರ್ ತುಮ್ಚ್ಯಾಕ್ನಾ ಘೆವ್ಕ್ ಯೊಗ್ಯ್ ಮನುನ್ ದಾಕ್ವುತಲ್ಯಾ ಚಿಟಿಯಾಂಚಿ ದುಸ್ರ್ಯಾಕ್ನಿ ಗರಜ್ ಹಾಯ್, ತಸೆ ಅಮ್ಕಾಬಿ ಗರಜ್ ಹಾಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:1
13 ತಿಳಿವುಗಳ ಹೋಲಿಕೆ  

ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ.


ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವುದಕ್ಕಾಗಲಿ ಅವರೊಂದಿಗೆ ಹೋಲಿಸುವುದಕ್ಕಾಗಲಿ ನಾನು ಇಷ್ಟಪಡುವುದಿಲ್ಲ. ಅವರಂತೂ ತಮ್ಮತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮ್ಮನ್ನು ತಮಗೇ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.


ನಾವು ನಮ್ಮನ್ನು ಮತ್ತೆ, ಮತ್ತೆ ನಿಮ್ಮೆದುರು ಹೊಗಳಿಕೊಳ್ಳುವುದಿಲ್ಲ; ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಯನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ.


ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.


ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿರುವವರೆಂದು ಭಾವಿಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ, ನಾವು ಕ್ರಿಸ್ತನಲ್ಲಿದ್ದು ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಮಾತನಾಡುವವರಾಗಿದ್ದೇವೆ.


ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾಚಿಕೆಪಡಬೇಕಾಗಿರುವುದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಕಟ್ಟುವುದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟಿರುವವನು.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.


ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.


ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಪೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಖ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಿಯಾಗಿದ್ದಾಳೆ;


ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು