Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದದರಿಂದ ನಾವು ಇಂಥ ಭರವಸವುಳ್ಳವರಾಗಿದ್ದು ಧಾರಾಳವಾಗಿ ಮಾತಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮಗೆ ಈ ನಿರೀಕ್ಷೆ ಇರುವುದರಿಂದ ನಾವು ಬಹಳ ಧೈರ್ಯವಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇಂಥಾ ನಿರೀಕ್ಷೆಯು ನಮಗಿರುವುದರಿಂದ ನಾವು ಬಹಳ ಧೈರ್ಯಶಾಲಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಮ್ಕಾ ಅಸ್ಲೊ ಬರೊಸೊ ಹಾಯ್ ಮನುನ್ ಅಮಿ ಧೈರ್ಯಾನ್ ಬೊಲ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:12
21 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ.


ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.


ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.


ಅದಕ್ಕೆ ಆತನ ಶಿಷ್ಯರು, “ಇಗೋ, ನೀನು ಹೇಳುವ ಸಂಗತಿಯನ್ನು ಈಗ ಸಾಮ್ಯರೂಪವಾಗಿ ಹೇಳದೆ ಸ್ಪಷ್ಟವಾಗಿ ಹೇಳುತ್ತಿದ್ದೀ.


ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.


ನಾನು ಆ ಸತ್ಯಾರ್ಥವನ್ನು ಹೇಳಬೇಕಾದ ರೀತಿಯಲ್ಲಿ ಸ್ಪಷ್ಟವಾಗಿ ಹೇಳುವಂತೆ ಪ್ರಾರ್ಥಿಸಿರಿ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,


“ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ.


ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ.


ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.


ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು.


ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.


“ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ.


ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.


ಅಳಿದು ಹೋಗುವಂಥದ್ದೇ, ಅಷ್ಟು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಹೆಚ್ಚಾದ ಪ್ರಭಾವವುಳ್ಳದ್ದಾಗಿರಬೇಕಲ್ಲವೋ?


ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.


ವೃದ್ಧನೂ, ಈಗ ಕ್ರಿಸ್ತಯೇಸುವಿನ ನಿಮಿತ್ತ ಸೆರೆಯಾಳಾಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿಮಿತ್ತ ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು