Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ‘ಪ್ರಭುವಿಗೆ ಅಭಿಮುಖರಾದಾಗ ಮಾತ್ರ ಆ ಮುಸುಕನ್ನು ತೆಗೆಯಲಾಗುತ್ತದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಒಬ್ಬ ವ್ಯಕ್ತಿಯು ಮಾರ್ಪಾಟಾಗಿ ಪ್ರಭುವನ್ನು ಅನುಸರಿಸುವಾಗ ಆ ಮುಸುಕು ತೆಗೆಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಯಾರಾದರೂ ಕರ್ತ ಯೇಸುವಿನ ಕಡೆಗೆ ತಿರುಗಿದಾಗೆಲ್ಲಾ, ಆ ಮುಸುಕು ಅವರಿಂದ ತೆಗೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಧನಿಯಾ ಕಡೆ ಪರತಲ್ಲ್ಯಾ ತನ್ನಾ ತೆ ಧಾಪಲ್ಲೆ ಪಡುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:16
13 ತಿಳಿವುಗಳ ಹೋಲಿಕೆ  

ಮೋಶೆಯು ಯೆಹೋವನ ಸಂಗಡ ಮಾತನಾಡಬೇಕೆಂದು ಆತನ ಸನ್ನಿಧಿಗೆ ಹೋಗುವಾಗಲೆಲ್ಲಾ ಈ ಮುಸುಕನ್ನು ಹಾಕಿಕೊಳ್ಳುತ್ತಿದ್ದನು. ಹೊರಗೆ ಬಂದಾಗ ಆ ಮುಸುಕನ್ನು ತೆಗೆದಿಡುತ್ತಿದ್ದನು. ಅವನು ಹೊರಗೆ ಬಂದಾಗ ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸುತ್ತಿದ್ದನು.


ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.


ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು.


ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.


ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.


ನಮ್ಮ ನಡತೆಯನ್ನು ಶೋಧಿಸಿ, ಪರೀಕ್ಷಿಸಿಕೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳೋಣ.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.


ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು.


ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.


ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗೆಲ್ಲಾ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು