Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೊಂಡಾರ್ ಕಾಯ್ಬಿ ಧಾಪಿ ನಸ್ತಾನಾ ಧನಿಯಾಚಿ ಮಹಿಮಾ ದಾಕ್ವುನ್ ದಿತಲೆ ಅಮಿ ಹೊತಾಂವ್, ಅಶೆ ಅಮಿ ಧನಿಯಾಚ್ಯಾ ಮಹಿಮೆನ್ ಲೈ ಅನಿ ಲೈ ಹೊಳ್ ಹೊಳ್ತಾಂವ್ ಅನಿ ತೆಚ್ಯಾ ಸರ್ಕೆ ಹೊವ್ನ್ ರುಪ್ ಬದಲ್ತಾವ್. ಹೆ ಸಗ್ಳೆ ಆತ್ಮೊ ಹೊವ್ನ್ ಅಸಲ್ಲ್ಯಾ ಧನಿಯಾಚೆಚ್ ಕಾಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:18
24 ತಿಳಿವುಗಳ ಹೋಲಿಕೆ  

ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.


ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.


ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು.


ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.


ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.


ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.


ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.


ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.


ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.


ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,


ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.


ಆ ಕರ್ತನು ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು