Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಈ ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೆ ಅಮ್ಕಾ ನವ್ಯಾ ಕರಾರಾಚಿ ಕರುನ್ ಯೊಗ್ಯ್ ಕರ್‍ತಾ, ತೆ ಲಿವಲ್ಲೊ ಖಾಯ್ದೊ ನ್ಹಯ್, ಅತ್ಮ್ಯಾಚ್ಯಾ ವೈನಾ ದಾಕ್ವುನ್ ದಿತಾ, ಲಿವಲ್ಲೊ ಖಾಯ್ದೊ ಮರಾನ್ ಹಾನ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:6
45 ತಿಳಿವುಗಳ ಹೋಲಿಕೆ  

ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.


ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.


ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.


ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಯೇಸು ಪ್ರತಿಜ್ಞೆಯೊಡನೆಯೇ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.


ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.


“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.


ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.


ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.


ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


“ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.


ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.


ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.


ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.


ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.


ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.


ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.


ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.


ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ.


ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.


ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೆಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತ್ತದಲ್ಲವೋ?


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.


ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.


ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು.


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.


ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.


ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.


ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.


ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.


ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು