Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಲಜ್ಜಾ ಕರುನ್ ಧಾಪುನ್ ನ್ಹೆತಲ್ಯಾ ತ್ಯಾ ಚಾಲಿಯಾ ಅಮಿ ಸೊಡ್ತಾಂವ್; ಅಮಿ ಕಪಟ್ ಚಾಲಿನ್ ಚಲಿನಾವ್ ಅನಿ ದೆವಾಚಿ ಗೊಸ್ಟ್ ಕನ್ನಾಚ್ ಝುಟಿ ಕರಿನಾವ್, ಸಾಂಗುಚೆ ಜಾಲ್ಯಾರ್, ಖರೆ ಅಸಲ್ಲೆ ಪರ್ಗಟ್ ಕರ್ತಾಂವ್. ದೆವಾಚ್ಯಾ ಇದ್ರಾಕ್ ಅಮಿ ಹರ್ ಎಕ್ ಮಾನ್ಸಾಚ್ಯಾ ಭುತ್ತುರ್‍ಲ್ಯಾ ಮನಾಕ್ನಿ ಬರೆ ದಿಸಿ ಸಾರ್ಕೆ ಚಲ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:2
16 ತಿಳಿವುಗಳ ಹೋಲಿಕೆ  

ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.


ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.


ಯಾಕೆಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿ ಬರಲಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು.


ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.


ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,


ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?


ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ.


ಅವರು ತೆಗೆದುಕೊಂಡು ಬರಲು, “ಇನ್ನೊಂದು ಸಾರಿ ತನ್ನಿರಿ” ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಿಲು ಅವರು ಮತ್ತೊಮ್ಮೆ ತಂದು ಸುರಿದರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು