Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣ ಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟವರಾಗಿದ್ದರೂ ಪ್ರಾಣನಷ್ಟಪಡುವವರಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಹಿಂಸೆಗೆ ಗುರಿಯಾದೆವು, ಆದರೆ ದೇವರು ನಮ್ಮನ್ನು ತೊರೆದುಬಿಡಲಿಲ್ಲ. ಕೆಲವು ಸಲ ನಮಗೆ ನೋವಾಯಿತು, ಆದರೂ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹಿಂಸೆಗೆ ಒಳಪಟ್ಟರೂ ಕೈಬಿಟ್ಟವವರಲ್ಲ, ದಬ್ಬಿದವರಾದಾಗ್ಯೂ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮಿ ತರಾಸ್ ಸೊಸ್ತಾವ್, ಜಾಲ್ಯಾರ್ ಬಿ ಎಕ್ಲ್ಯಾಕುಚ್ ಸೊಡಲ್ಲ್ಯಾ ಸಾರ್ಕೆ ಅಮಿ ಹೊವ್ಕನಾವ್; ಲೈಂದಾ ಅಮ್ಕಾ ಲೈ ತರಾಸಾತ್ ಟಾಕುನ್ ಹೊತಾ, ಜಾಲ್ಯಾರ್ ಬಿ ಅಮಿ ನಾಸ್ ಹೊವ್ಕನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:9
19 ತಿಳಿವುಗಳ ಹೋಲಿಕೆ  

ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.


ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.


ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.


ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.


ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.


ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?


ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.


“ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ.


ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?


ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು