Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜಗಾತ್ ಹೊತ್ತಿ ಅಮ್ಚೆ ಬಿಡಾರ್ ಮಟ್ಲ್ಯಾರ್ ಅಮ್ಚೆ ಆಂಗ್ ಮನ್ತಲೆ ಮೊಡುನ್ ಗೆಲ್ಯಾರ್ ಬಿ, ದೆವಾನ್ ತಯಾರ್ ಕರಲ್ಲೆ ಮಟ್ಲ್ಯಾರ್ ಹಾತಿನ್ ಭಾಂದಿನಸಲ್ಲೆ ಸರ್ವತಾಕ್ ರ್‍ಹಾತಲೆ ಘರ್ ಅಮ್ಕಾ ತಯಾರ್ ಹಾಯ್ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:1
25 ತಿಳಿವುಗಳ ಹೋಲಿಕೆ  

ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.


ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.


ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,


ಧೂಳಿನಲ್ಲಿರುವ ಅಸ್ತಿವಾರದ ಮೇಲೆ, ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.


ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.


ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ.


ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.


ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.


ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.


ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.


ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.


ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.


ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.


ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.


ನನ್ನನ್ನು ಬಿರುಗಾಳಿಗೆ ಎತ್ತಿ ತೂರಿಬಿಟ್ಟು, ಅದರ ಆರ್ಭಟದಲ್ಲಿ ಮಾಯಮಾಡುತ್ತಿ.


ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ. ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.


ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು