Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರುವುದರಿಂದ ನಾವು ಯಾವಾಗಲೂ ನಂಬಿಕೆಯುಳ್ಳವರಾಗಿರಬೇಕು; ದೇಹದಲ್ಲಿ ವಾಸಿಸುವವರೆಗೂ ಕರ್ತನಿಂದ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ಕಾರಣದಿಂದಲೇ ನಾವು ಸದಾ ಸ್ಥಿರಚಿತ್ತರಾಗಿದ್ದೇವೆ. ಈ ದೇಹವನ್ನೇ ನೆಚ್ಚಿ ಇದರಲ್ಲೇ ನೆಲೆಯಾಗಿರುವವರೆಗೂ ನಾವು ಪ್ರಭುವಿನಿಂದ ದೂರವಿರುವ ಪ್ರವಾಸಿಗಳಂತೆ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರುವದರಿಂದ ನಾವು ಯಾವಾಗಲೂ ಧೈರ್ಯವುಳ್ಳವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಯಾವಾಗಲೂ ಧೈರ್ಯದಿಂದಿದ್ದೇವೆ. ಈ ದೇಹದಲ್ಲಿ ವಾಸವಾಗಿರುವ ತನಕ ಪ್ರಭುವಿನಿಂದ ದೂರವಾಗಿರುತ್ತೇವೆಂಬುದು ನಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ಶರೀರದಲ್ಲಿ ವಾಸಿಸುವವರೆಗೂ ನಾವು ಕರ್ತನಿಂದ ದೂರವಾಗಿದ್ದೇವೆಂದು ತಿಳಿದು, ನಾವು ಯಾವಾಗಲೂ ಭರವಸೆ ಉಳ್ಳವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಚೆಸಾಟ್ನಿ ಅಮಿ ಕನ್ನಾಬಿ ಧೈರ್ಯಾನ್ ಜಿವನ್ ಕರ್ತಾವ್. ಅಮಿ ಹ್ಯಾ ಆಂಗ್ ಮನ್ತಲ್ಯಾ ಘರಾತ್ ರ್‍ಹಾಯ್ ಪತರ್ ಅಮ್ಚ್ಯಾ ಧನಿಯಾಚ್ಯಾ ಘರಾಕ್ನಾ ಧುರ್ ಹಾಂವ್ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:6
15 ತಿಳಿವುಗಳ ಹೋಲಿಕೆ  

ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.


ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,


ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.


ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.


ರಬ್ಷಾಕೆಯು ಅವರಿಗೆ, “ನೀವು ಹೋಗಿ, ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ, ‘ಈ ನಿನ್ನ ಭರವಸೆಗೆ ಯಾವ ಆಧಾರವುಂಟು?


ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.


ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.


ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ, ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.


ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.


ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು