Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದೆವಾಚ್ಯಾ ಕಾಮಾತ್ ತೆಚೆ ವಾಂಗ್ಡಿ ಹೊವ್ನ್ ಹೊತ್ತೆ ಅಮಿ ತುಮ್ಕಾ ಅಶೆ ಸಾಂಗ್ತಾವ್; ದೆವಾಕ್ನಾ ತುಮಿ ಘೆಟಲ್ಲಿ ತಿ ಕುರ್ಪಾ ಫಾಯ್ದ್ಯಾಕ್ ಪಡಿನಸಲ್ಲ್ಯಾ ಸರ್ಕೆ ಕರುನ್ ಘೆವ್‍ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:1
19 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.


ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.


ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು?


ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.


ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,


ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.


ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.


ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು