2 ಕೊರಿಂಥದವರಿಗೆ 6:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ: “ನಾನು ಅವರೊಂದಿಗೆ ವಾಸಿಸುವೆನು; ಅವರೊಂದಿಗೆ ನಡೆಯುವೆನು; ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಸಾಂಗಾ ಮಾಕಾ ದೆವಾಚ್ಯಾ ಗುಡಿಚ್ಯಾ ವಾಂಗ್ಡಾ ದುಸ್ರ್ಯಾ ಮುರ್ತಿಯಾಕ್ನಿ ಗೌರವ್ ದಿವ್ಕ್ ಹೊತಾ ಕಾಯ್? ಅಮಿಚ್ ಝಿತ್ತ್ಯಾ ದೆವಾಚೆ ಗುಡಿ! ಹೆಚ್ಯಾ ವಿಶಯಾತ್ ದೆವಾನುಚ್ ಸಾಂಗಲ್ಲೆ ಹಾಯ್, “ಮಿಂಯಾ ಮಾಜ್ಯಾ ಲೊಕಾಂಚ್ಯಾ ಮದ್ದಿ ರಾತಾ, ತೆಂಚ್ಯಾ ಭುತ್ತುರ್ ಮಿಯಾ ವಸ್ತಿ ಕರ್‍ತಾ, ಮಿಯಾ ತೆಂಚೊ ದೆವ್ ಹೊತಾ, ತೆನಿ ಮಾಜಿ ಲೊಕಾ ಹೊತ್ಯಾತ್.” ಅಧ್ಯಾಯವನ್ನು ನೋಡಿ |