Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ಸೇವಾಕಾರ್ಯವು ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಯಾವ ತೆರನಾದ ಅಡ್ಡಿಯನ್ನೂ ಒಡ್ಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3-4 ನಿಂದೆಗೆ ಅವಕಾಶಕೊಡದೆ ಎಲ್ಲಾ ಸಂಗತಿಗಳಲ್ಲಿ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ. ನಾವು ಸಂಕಟಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮ್ಮ ಸೇವೆಯು ನಿಂದೆಗೆ ಒಳಗಾಗಬಾರದೆಂದು ನಾವು ಯಾರಿಗೂ ತೊಂದರೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ಸೇವೆಯು ಅಪವಾದಕ್ಕೆ ಗುರಿಯಾಗದಂತೆ ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮ್ಚ್ಯಾ ಜವಾಬ್ದಾರಿಪಾನಾಕ್‍ ಕೊನ್‍ಬಿ ಅಪ್ವಾದ್ ಘಾಲುಚೆ ನ್ಹಯ್ ಮನುನ್, ಅಮಿ ಕೊನಾಚ್ಯಾಬಿ ವಾಟೆರ್ ಅಡ್ಕಳ್ ಘಾಲುಕ್ ಜಾಯ್ನಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:3
11 ತಿಳಿವುಗಳ ಹೋಲಿಕೆ  

ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು.


ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.


ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.


ನಾವು ಸಂಗ್ರಹಿಸುತ್ತಿರುವಂತಹ ಈ ಉದಾರ ಕೊಡುಗೆಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದಕೊಡಬಾರದು.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.


ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು