Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಟುಪೆಟ್ಟುಗಳನ್ನು ತಿಂದಿದ್ದೇವೆ, ಸೆರೆಮನೆವಾಸ ಅನುಭವಿಸಿದ್ದೇವೆ, ಕೋಪಕ್ರಾಂತಿಗಳಿಗೆ ಗುರಿಯಾಗಿದ್ದೇವೆ, ಮೈಮುರಿಯೆ ದುಡಿದಿದ್ದೇವೆ, ನಿದ್ದೆಗೆಟ್ಟು ಬಳಲಿದ್ದೇವೆ, ಊಟವಿಲ್ಲದೆ ಸೊರಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ಪೆಟ್ಟು ತಿಂದಿದ್ದೇವೆ, ಸೆರೆವಾಸವಾಗಿದ್ದೇವೆ, ಕಲಹಗಳನ್ನು ಅನುಭವಿಸಿದ್ದೇವೆ, ಶ್ರಮೆಪಟ್ಟು ದುಡಿದಿದ್ದೇವೆ, ರಾತ್ರಿಯಲ್ಲಿ ನಿದ್ರೆಗೆಟ್ಟಿದ್ದೇವೆ, ಊಟವಿಲ್ಲದೆ ಹಸಿದಿದ್ದೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮಿ ಮಾರ್ ಖಾತಾನಾ, ಬಂದಿಖಾನ್ಯಾತ್ ಪಡಲ್ಲ್ಯಾ ತನ್ನಾ, ಡಂಗೊ ಉಟಲ್ಲ್ಯಾ ತನ್ನಾ, ಅಮಿ ನಿಜ್ ಅನಿ ಜೆವಾನ್ ನಸ್ತಾನಾ ಘಟ್ ಕಾಮ್ ಕರ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:5
48 ತಿಳಿವುಗಳ ಹೋಲಿಕೆ  

ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.


ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.


ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.


ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.


ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು.


ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.


ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.


ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ,


ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.


ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು.


ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.


ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.


“ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.


ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.


ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.


ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.


ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.


ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.


ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.


ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,


ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.


“ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ


“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.


ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.


ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು.


ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.


ಪೆಟ್ಟುಗಳ ಶಿಕ್ಷೆಯು ನಲ್ವತ್ತಕ್ಕಿಂತ ಹೆಚ್ಚಿರಬಾರದು. ಅದಕ್ಕಿಂತ ಹೆಚ್ಚು ಪೆಟ್ಟುಗಳನ್ನು ನೀವು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ನೀವು ಕೇವಲ ನೀಚನನ್ನಾಗಿ ಕಂಡಂತೆ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು