Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಶುದ್ಧಮನಸ್ಸು ಜ್ಞಾನ ದೀರ್ಘಶಾಂತಿ ದಯೆ ಪವಿತ್ರಾತ್ಮ ಕಪಟವಿಲ್ಲದ ಪ್ರೀತಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾವು ದೇವರ ಸೇವಕರೆಂಬುದನ್ನು ನಮ್ಮ ತಿಳುವಳಿಕೆಯಿಂದಲೂ ತಾಳ್ಮೆಯಿಂದಲೂ ಕನಿಕರದಿಂದಲೂ ಮತ್ತು ಪರಿಶುದ್ಧ ಜೀವಿತದಿಂದಲೂ ತೋರ್ಪಡಿಸಿದ್ದೇವೆ. ನಾವು ಇದನ್ನು ಪವಿತ್ರಾತ್ಮನಿಂದಲೂ ನಿಜವಾದ ಪ್ರೀತಿಯಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪವಿತ್ರಾತ್ಮ ದೇವರ ಸಹಾಯದಿಂದ ಶುದ್ಧ ಮನಸ್ಸು, ತಿಳುವಳಿಕೆ, ಸಹನೆಯು ಮತ್ತು ದಯೆಯಿಂದಕೂಡಿ, ನಿಷ್ಕಪಟ ಪ್ರೀತಿಯಲ್ಲಿ ಜೀವಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಶೆಚ್ ನಿತಳ್ ಮನಾನಿ, ಶಾನ್ಪಾನಾನ್, ಲೈ ಸಂಬಾಳುನ್ ಅನಿ ದಯಾಳ್ ಸ್ವಭಾವಾನ್ ಅಮಿ ಕ್ರಿಸ್ತಾಚಿ ಸೆವಕಾ ಮನುನ್ ಪವಿತ್ರ್ ಆತ್ಮ್ಯಾ ವೈನಾ ಅಮ್ಚೊ ಖರೊ ಪ್ರೆಮ್ ದಾಕ್ವುನ್ ದಿಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:6
41 ತಿಳಿವುಗಳ ಹೋಲಿಕೆ  

ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?


ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ?


ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲನು.


ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.


ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.


ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಬಹಳವಾಗಿ ಕಣ್ಣೀರಿಡುತ್ತಾ ಹೃದಯದ ಬಹು ಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನೇ ಹೊರತು ನಿಮ್ಮನ್ನು ನೋಯಿಸುವುದಕ್ಕಾಗಿಯಲ್ಲ.


ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.


“ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ಆಕೆಯು ತಿರುಗಿ ಅವನಿಗೆ, “ನನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳುವೇ? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರು ಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾ ಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ” ಅಂದಳು.


ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.


ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು.


ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?


ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.


ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.


ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ,


ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.


ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು


ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.


ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು