Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ, ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸತ್ಯೋಕ್ತಿ, ದೈವಶಕ್ತಿ, ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸತ್ಯವಾಕ್ಯ ದೇವರ ಮಹತ್ವ ಇವುಗಳಿಂದ ಕೂಡಿದವರಾಗಿದ್ದೇವೆ. ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸತ್ಯವನ್ನು ಹೇಳುವುದರಿಂದಲೂ ದೇವರ ಶಕ್ತಿಯಿಂದಲೂ ತೋರ್ಪಡಿಸುತ್ತೇವೆ. ಪ್ರತಿಯೊಂದರ ವಿರೋಧವಾಗಿ ನಮ್ಮನ್ನು ಸಂರಕ್ಷಿಸಿಕೊಳ್ಳಲು ನಮ್ಮ ಒಳ್ಳೆಯ ಜೀವಿತವನ್ನೇ ಉಪಯೋಗಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸತ್ಯಮಾತುಗಳಿಂದಲೂ, ದೇವರ ಶಕ್ತಿಯಿಂದಲೂ, ಎಡಬಲಗೈಗಳಲ್ಲಿ ನೀತಿಯ ಆಯುಧಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರ್‍ಯಾ ಗೊಸ್ಟಿಯಾತ್ನಿ ದೆವಾಚೊ ಬಳ್ ಹಾಯ್, ಅಮ್ಚ್ಯಾ ಹಾತಾತ್ನಿ ನಿತಿವಂತ್ಪಾನಾಚಿ ಹಾತಿಯಾರಾ ಘೆವ್ನ್ ಹಾಂವ್, ಅಮ್ಚ್ಯಾ ವರ್‍ತಿ ಆಕ್ರಮನ್ ಅಡ್ವುಕ್ ಅನಿ ಅಮ್ಕಾಚ್ ಅಮಿ ರಾಕುಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:7
27 ತಿಳಿವುಗಳ ಹೋಲಿಕೆ  

ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.


ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.


ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.


ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ


ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ.


ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.


ಯಾಕೆಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿ ಬರಲಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು.


ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.


ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.


ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.


ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.


ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.


ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.


ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.


ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು