2 ಕೊರಿಂಥದವರಿಗೆ 7:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತೀತನ ಆಗಮನದಿಂದ ಮಾತ್ರವಲ್ಲ, ನೀವು ಆತನಿಗೆ ತೋರಿದ ಪ್ರೀತ್ಯಾದರದ ವರದಿಯಿಂದಲೂ ನಾವು ಪುನಃ ಚೇತನಗೊಂಡೆವು. ನನ್ನನ್ನು ನೋಡಲು ನಿಮಗಿರುವ ಹಂಬಲ, ನನ್ನ ಮೇಲೆ ನಿಮಗಿರುವ ಅನುಕಂಪ, ನನ್ನ ಬಗ್ಗೆ ನಿಮಗಿರುವ ಹಿತಚಿಂತನೆ, ಇವುಗಳನ್ನು ಕೇಳಿ ನಮಗೆ ಮತ್ತಷ್ಟು ಆನಂದವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನ ಬರುವಿಕೆಯಿಂದ ಮಾತ್ರವಲ್ಲದೆ ಅವನು ತಾನು ನಿಮ್ಮಲ್ಲಿ ಬಹಳ ಆದರಣೆಯನ್ನು ಹೊಂದಿದೆನೆಂದು ಹೇಳಿದ್ದರಿಂದಲೂ ನಮ್ಮನ್ನು ಸಂತೈಸಿದನು. ಅವನು ನಿಮ್ಮ ಹಂಬಲ, ನಿಮ್ಮ ಗೋಳಾಟ, ನನ್ನ ವಿಷಯವಾದ ನಿಮ್ಮ ಆಸಕ್ತಿ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವನ ಆಗಮನದಿಂದಲೂ ನೀವು ಅವನಿಗೆ ಕೊಟ್ಟ ಆದರಣೆಯಿಂದಲೂ ನಮಗೆ ಸಮಾಧಾನವಾಯಿತು. ನನ್ನನ್ನು ನೋಡಲು ನಿಮಗಿರುವ ಹಂಬಲದ ಕುರಿತಾಗಿಯೂ ನಿಮ್ಮ ಕಾರ್ಯಗಳಿಂದ ನಿಮಗಾಗಿರುವ ದುಃಖದ ಕುರಿತಾಗಿಯೂ ನನ್ನ ವಿಷಯವಾಗಿ ನಿಮಗಿರುವ ಮಹಾಹಿತಚಿಂತನೆಯ ಕುರಿತಾಗಿಯೂ ಅವನು ನನಗೆ ಹೇಳಿದಾಗ ನನಗೆ ಬಹಳ ಸಂತೋಷವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ತೀತನು ಬರುವುದರಿಂದ ಮಾತ್ರವಲ್ಲ, ನೀವು ಅವನನ್ನು ಸ್ವೀಕರಿಸಿ, ಆದರಣೆಗಳಿಂದ ಸತ್ಕರಿಸಿದ್ದನ್ನು ಕೇಳಿ ನಮಗೆ ಸಂತೋಷವಾಯಿತು. ನೀವು ನನಗಾಗಿ ಹಂಬಲಿಸುತ್ತಿರುವುದನ್ನೂ, ಚಿಂತಿಸುವುದನ್ನೂ, ನನ್ನ ಮೇಲೆ ನಿಮಗಿರುವ ಆಳವಾದ ಅನುಕಂಪವನ್ನೂ ನಾವು ತೀತನಿಂದ ಕೇಳಿದಾಗ, ನಾನು ಇನ್ನೂ ಅಧಿಕ ಆನಂದಪಟ್ಟೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತೆಚ್ಯಾ ಯೆನ್ಯಾಚ್ಯಾ ವೈನಾ ಎವ್ಡೆಚ್ ನ್ಹಯ್, ತುಮಿ ತೆಕಾ ದಿಲ್ಲ್ಯಾ ಉತ್ತೆಜನಾಚಿ ಖಬರ್ ಆಯ್ಕುನ್, ಮಾಜ್ಯಾ ಭುತ್ತುರ್ ಜಿವ್ ಭರ್‍ಲೊ ತುಮಿ ಮಾಕಾ ಕವ್ಡೆ ರಾಕುಲ್ಯಾಶಿ, ಅನಿ ಕವ್ಡೆ ಬೆಜಾರಾನ್ ಹಾಸಿ, ಅನಿ ಉಸ್ಕೊ ಕರುನ್ ಹಾಸಿ ಹೆ ಸಗ್ಳೆ ಮಾಕಾ ತೆನಿ ಸಾಂಗಲ್ಲ್ಯಾ ತನ್ನಾ, ಮಾಕಾ ಅನಿಉಲ್ಲೊ ಸಂತೊಸ್ ಹೊಲೊ. ಅಧ್ಯಾಯವನ್ನು ನೋಡಿ |