2 ಕೊರಿಂಥದವರಿಗೆ 7:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ಬರೆದ ಪತ್ರದಿಂದ ನಿಮಗೆ ದುಃಖವಾಗಿದ್ದರೂ ನನಗೆ ವಿಷಾದವಿಲ್ಲ, ಅದು ನಿಮ್ಮನ್ನು ಸ್ವಲ್ಪ ಸಮಯ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪ ಪಟ್ಟಿದ್ದರೂ ಈಗ ಸಂತೋಷಪಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾನು ಬರೆದ ಪತ್ರದಿಂದ ನಿಮ್ಮ ಮನಸ್ಸಿಗೆ ನೋವಾಗಿರಬಹುದು. ಆದರೂ ಚಿಂತೆಯಿಲ್ಲ. ಆ ಪತ್ರವು ನಿಮ್ಮನ್ನು ಸ್ವಲ್ಪಕಾಲ ದುಃಖಕ್ಕೀಡುಮಾಡಿತೆಂದು ನಾನು ಮೊದಮೊದಲು ನೊಂದುಕೊಂಡೆನಾದರೂ ಈಗ ಸಂತೋಷಪಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ಬರೆದ ಪತ್ರಿಕೆಯು ನಿಮ್ಮನ್ನು ದುಃಖಪಡಿಸಿದ್ದರೂ ನನಗೆ ಪಶ್ಚಾತ್ತಾಪವಿಲ್ಲ. ಅದು ನಿಮ್ಮನ್ನು ಒಂದು ಗಳಿಗೆ ಹೊತ್ತಾದರೂ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪಪಡುತ್ತಿದ್ದರೂ ಈಗ ಸಂತೋಷಪಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ನಿಮಗೆ ಬರೆದ ಪತ್ರವು ನಿಮಗೆ ದುಃಖವನ್ನು ಉಂಟುಮಾಡಿದ್ದರೂ, ಅದನ್ನು ಬರೆದದ್ದಕ್ಕೆ ನನಗೆ ದುಃಖವಿಲ್ಲ, ಆ ಪತ್ರವು ನಿಮಗೆ ದುಃಖವನ್ನು ಉಂಟು ಮಾಡಿತೆಂದು ನನಗೆಗೊತ್ತಿದೆ. ಆ ವಿಷಯದಲ್ಲಿ ನನಗೆ ವ್ಯಸನವಾಯಿತು. ಆದರೆ ಅದು ನಿಮ್ಮನ್ನು ಸ್ವಲ್ಪಕಾಲದವರೆಗೆ ಮಾತ್ರ ದುಃಖಿತರನ್ನಾಗಿ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ಬರೆದಿದ್ದ ಪತ್ರದಿಂದ ನಿಮಗೆ ದುಃಖವಾಗಿದ್ದಲ್ಲಿ, ನಾನು ಅದಕ್ಕೆ ಬೇಸರಪಡುವುದಿಲ್ಲ. ನನ್ನ ಪತ್ರದಿಂದ ನಿಮಗೆ ದುಃಖವಾಯಿತಲ್ಲಾ ಎಂದು ಸ್ವಲ್ಪಕಾಲ ನಾನು ನೊಂದುಕೊಂಡಿದ್ದರೂ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಮಾಜ್ಯಾ ಚಿಟಿ ವೈನಾ ಮಿಯಾ ತುಮ್ಕಾ ದುಕ್ವುಲೊ, ಜಾಲ್ಯಾರ್ಬಿ ತ್ಯಾತುರ್ ಮಾಕಾ ಕಾಯ್ ಬೆಜಾರ್ ನಾ. ತ್ಯಾ ಚಿಟಿಕ್ ಲಾಗುನ್ ಎಕ್ ಉಲ್ಲ್ಯಾ ಎಳಾಕ್ ತರ್ ಬಿ ಮಿಯಾ ತುಮ್ಕಾ ಬೆಜಾರಾತ್ ಘಾಟ್ಲೊ ಮನುನ್ ಚಿಂತುನ್ ಮಾಕಾಬಿ ಬೆಜಾರ್ ಹೊಲೊ. ಜಾಲ್ಯಾರ್ಬಿ ಅತ್ತಾ ಮಿಯಾ ಕುಶಿ ಹೊತಾ. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.