Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯ ಕುರಿತು ನಿಮಗೆ ತಿಳಿಯಬೇಕೆಂದು ಬಯಸುತ್ತೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ಮಕೆದೋನಿಯ ಸಭೆಗಳಿಗೆ ದೇವರು ದಯಪಾಲಿಸಿದ ಕೃಪಾತಿಶಯಗಳನ್ನು ನಾನು ನಿಮಗೆ ತಿಳಿಸ ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ಮಕೆದೋನ್ಯದ ಸಭೆಗಳಲ್ಲಿ ದೇವರ ಕೃಪೆಯು ತೋರಿದ ಬಗೆಯನ್ನು ನಿಮಗೆ ತಿಳಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ಮಕೆದೋನಿಯದ ಸಭೆಗಳಲ್ಲಿ ದೇವರು ತೋರಿದ ಕೃಪೆಯ ಬಗ್ಗೆ ನಿಮಗೆ ತಿಳಿಸಲು ಇಷ್ಟಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ಮಕೆದೋನ್ಯದಲ್ಲಿರುವ ಸಭೆಗಳಿಗೆ ದೇವರು ಕೊಟ್ಟಿರುವ ಕೃಪೆಯನ್ನು ಕುರಿತು ನೀವು ತಿಳಿದಿರಬೇಕೆಂದು ನಮ್ಮ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಭಾವಾನು ಅನಿ ಭೆನಿಯಾನು, ಮೆಸಿದೊನಿಯಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ದೆವಾನ್ ದಿಲ್ಲ್ಯಾಕುರ್ಪೆಚ್ಯಾ ವಿಶಯಾತ್ ತುಮ್ಕಾ ಗೊತ್ತ್ ರ್‍ಹಾವ್ಚೆ ಮನುನ್ ಮಾಜಿ ಆಶಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:1
15 ತಿಳಿವುಗಳ ಹೋಲಿಕೆ  

ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.


ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ.


ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.


ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.


ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.


ನೀವು ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ.


“ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.


ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು