Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದು ಮಾತ್ರವಲ್ಲದೆ, ಕರ್ತನ ಮಹಿಮೆಗಾಗಿ ಮತ್ತು ನಮ್ಮ ಸಿದ್ಧ ಮನಸ್ಸನ್ನು ತೋರಿಸುವುದಕ್ಕಾಗಿ ನಾವು ನಡಿಸುವ ಧರ್ಮಕಾರ್ಯದ ಸಂಬಂಧವಾಗಿ ನಮ್ಮ ಸಂಗಡ ಪ್ರಯಾಣಮಾಡುವಂತೆ ಸಭೆಗಳಿಂದ ಇವನು ಆರಿಸಲ್ಪಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದಷ್ಟೇ ಅಲ್ಲದೆ, ಪ್ರಭುವಿನ ಮಹಿಮೆ ಬೆಳಗುವಂತೆಯೂ ಇತರರಿಗೆ ನೆರವಾಗಬೇಕೆಂಬ ಸದುದ್ದೇಶದಿಂದಲೂ ನಾವು ಕೈಗೊಂಡಿರುವ ಸೇವಾಕಾರ್ಯದಲ್ಲಿ ನಮ್ಮ ಸಂಗಡ ಪ್ರಯಾಣಮಾಡಲೆಂದು ಸಭೆಯವರು ಈತನನ್ನು ನೇಮಕಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದು ಮಾತ್ರವಲ್ಲದೆ ನಾವು ನಡಿಸುವ ಈ ಧರ್ಮಕಾರ್ಯ ಸಂಬಂಧವಾಗಿ ಸಭೆಗಳವರು ಈತನನ್ನು ನಮ್ಮ ಸಂಗಡ ಪ್ರಯಾಣಮಾಡುವಂತೆ ಗೊತ್ತುಮಾಡಿದ್ದಾರೆ. ಅವರು ಹೀಗೆ ಮಾಡಿದ್ದರಿಂದ ಕರ್ತನಿಗೆ ಘನವೂ ನಮ್ಮಲ್ಲಿ ಸಿದ್ಧಮನಸ್ಸೂ ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದಲ್ಲದೆ, ನಾವು ಈ ಸಹಾಯಧನವನ್ನು ತೆಗೆದುಕೊಂಡು ಹೋಗುವಾಗ ನಮ್ಮ ಸಂಗಡವಿರುವುದಕ್ಕಾಗಿ ಸಭೆಗಳವರು ಈ ಸಹೋದರನನ್ನು ಆಯ್ಕೆಮಾಡಿದ್ದಾರೆ. ದೇವರ ಮಹಿಮೆಗಾಗಿಯೂ ಮತ್ತು ಸಹಾಯ ಮಾಡಲು ನಿಜವಾಗಿ ಬಯಸುತ್ತೇವೆ ಎಂಬುದನ್ನು ತೋರಿಸುವುದಕ್ಕಾಗಿಯೂ ಈ ಸೇವಾಕಾರ್ಯವನ್ನು ಮಾಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಲ್ಲದೆ, ಕರ್ತ ಯೇಸುವಿನ ಮಹಿಮೆಗಾಗಿಯೂ ಸಹಾಯಮಾಡಬೇಕೆಂಬ ಸದುದ್ದೇಶ ತೋರಿಸುವುದಕ್ಕಾಗಿಯೂ ನಾವು ಸೇವೆಯನ್ನು ನಿರ್ವಹಿಸುತ್ತೇವೆ. ಇದಕ್ಕಾಗಿಯೇ, ನಮ್ಮ ಜೊತೆ ಬಂದು ಸಹಾಯಮಾಡಲು ಸಭೆಗಳಿಂದ ಆಯ್ಕೆಯಾದವನು ಆ ಸಹೋದರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತವ್ಡೆಚ್ ನ್ಹಯ್ ದೆವಾಚ್ಯಾ ಮಹಿಮೆಕ್ ಫುರಾ ಮನಾನ್ ಅಮಿ ಕರ್ತಾಂವ್ ತ್ಯಾ ದಯಾಳ್ ಕಾಮಾತ್ನಿ, ಅಮ್ಚ್ಯಾ ಫಿರಾಟಾತ್ನಿ ಅಮ್ಚೊ ವಾಂಗ್ಡಿ ಕರುನ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾನಿ ತೆಕಾ ನೆಮಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:19
20 ತಿಳಿವುಗಳ ಹೋಲಿಕೆ  

ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.


ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.


ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,


ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,


ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.


ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.


ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.


ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ.


ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.


ಈ ಕಾರ್ಯವನ್ನು ಪ್ರಾರಂಭಿಸುವುದಕ್ಕೆ ನಿಮ್ಮಲ್ಲಿ ಸಿದ್ಧ ಮನಸ್ಸು ಇರುವ, ಹಾಗೆಯೇ ನಿಮ್ಮ ನಿಮ್ಮ ಶಕ್ತ್ಯನುಸಾರವಾಗಿ ಅದನ್ನು ನೆರವೇರಿಸಿರಿ.


ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.


ನಾವು ಸಂಗ್ರಹಿಸುತ್ತಿರುವಂತಹ ಈ ಉದಾರ ಕೊಡುಗೆಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದಕೊಡಬಾರದು.


ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು