Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಸಭೆಗಳವರು ಬಹಳ ಹಿಂಸೆ ತಾಳುವವರಾದರೂ ಮತ್ತು ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ವಿಶ್ವಾಸಿಗಳು ಅತೀವ ಕಷ್ಟಗಳಿಂದ ಪರೀಕ್ಷಿಸಲ್ಪಟ್ಟಿದ್ದಾರೆ. ಅವರು ಬಹಳ ಬಡಜನರು. ಆದರೆ ಅವರು ತಮ್ಮ ಮಹಾ ಆನಂದದಿಂದ ಬಹಳವಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಘೋರ ಹಿಂಸೆಯ ನಡುವೆಯಿದ್ದರೂ ಕಡುಬಡತನದಲ್ಲಿ ಬಳಲುತ್ತಿದ್ದರೂ ಅವರು ಬಹಳ ಸಂತೋಷದಿಂದ, ಉದಾರಮನಸ್ಸಿನಿಂದ ಕೊಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆಂಚಿ ಪರಿಕ್ಷಾ ಕರುಕ್ ಮನುನ್ ಯೆಲ್ಲ್ಯಾ ಕಸ್ಟಾ ಸಂಕಟಾತ್ನಿ ತೆನಿ ದಾಕ್ವಲ್ಲಿ, ತಿ ಮೆಜುಕ್ ಹೊಯ್ನಾ ತವ್ಡಿ ಕುಶಿ, ತೆನಿ ಲೈ ಗರಿಬ್ ರ್‍ಹಾಲ್ಯಾರ್‍ಬಿ ತೆನಿ ದಿಲ್ಲೆ ದಾನ್, ಎಕ್ ಬದಿಕುಚ್ ಹೊವ್ಕ್ ಪಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:2
20 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,


ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.


ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.


ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.


ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.


ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.


ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.


ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.


ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?


ಎಲ್ಲಾ ವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಎಂದು ನಿಮ್ಮ ಗುಣವನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಹೀಗೆ ಬರೆದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು