Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀವು ಸದಾ ಉದಾರಿಗಳಾಗಿರುವಂತೆ ನಿಮ್ಮನ್ನು ಎಲ್ಲಾ ವಿಧದಲ್ಲೂ ಸಿರಿವಂತರನ್ನಾಗಿ ಮಾಡುವರು. ನಿಮ್ಮ ಕೊಡುಗೆ ನಮ್ಮ ಸೇವೆಯ ಮೂಲಕ ಬೇರೆಯವರಿಗೆ ತಲುಪಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡ ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾವಾಗಲೂ ಉದಾರವಾಗಿ ಕೊಡಬೇಕೆಂದು ದೇವರು ನಿಮ್ಮನ್ನು ಪ್ರತಿಯೊಂದು ವಿಷಯದಲ್ಲಿಯೂ ಶ್ರೀಮಂತರನ್ನಾಗಿ ಮಾಡುವನು. ನಮ್ಮ ಮೂಲಕವಾಗಿ ನೀವು ಕೊಡುವ ಸಹಾಯಧನದ ನಿಮಿತ್ತ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಸದಾ ಉದಾರಿಗಳಾಗುವಂತೆ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿಯೂ ಸಿರಿವಂತರನ್ನಾಗಿ ಮಾಡುವನು. ನಿಮ್ಮ ಕೊಡುಗೆಯು ನಮ್ಮ ಸೇವೆಯ ಮೂಲಕ ಬೇರೆಯವರಿಗೆ ಮುಟ್ಟಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ನಡೆಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತುಮ್ಚೊ ಬರೊ ಮನ್ ಅನಿಬಿ ಮೊಟೊ ಕರುಸಾಟಿ ಹರಿಎಕ್ ವಾಟೆನ್ ತುಮ್ಕಾ ತೊ ಸಾವ್ಕಾರ್ ಕರ್‍ತಾ, ಅನಿ ತುಮ್ಚಿ ದೆನಿ ಅಮ್ಚ್ಯಾ ವೈನಾ ಲೈ ಲೊಕಾಕ್ನಿ ಗಾವಲ್ಲ್ಯಾ ತನ್ನಾ ದೆವಾಕ್ ತೆನಿ ಧನ್ಯವಾದ್ ದಿವ್ಕ್ ಪಾವ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:11
15 ತಿಳಿವುಗಳ ಹೋಲಿಕೆ  

ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.


ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.


ಇದು ಮಾತ್ರವಲ್ಲದೆ, ಕರ್ತನ ಮಹಿಮೆಗಾಗಿ ಮತ್ತು ನಮ್ಮ ಸಿದ್ಧ ಮನಸ್ಸನ್ನು ತೋರಿಸುವುದಕ್ಕಾಗಿ ನಾವು ನಡಿಸುವ ಧರ್ಮಕಾರ್ಯದ ಸಂಬಂಧವಾಗಿ ನಮ್ಮ ಸಂಗಡ ಪ್ರಯಾಣಮಾಡುವಂತೆ ಸಭೆಗಳಿಂದ ಇವನು ಆರಿಸಲ್ಪಟ್ಟಿದ್ದಾನೆ.


ನಿಮ್ಮ ವಿಷಯವಾಗಿ ನನಗಿರುವ ಹಿತ ಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರಮಾಡುತ್ತೇನೆ.


ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿವಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.


ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು.


ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.


ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.


ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು