Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕ್ರಿಸ್ತಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1-2 ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕ್ರಿಸ್ತ ಯೇಸುವಿನಲ್ಲಿರುವ ಜೀವವಾಗ್ದಾನವನ್ನು ತಿಳಿಯಪಡಿಸುವದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ದೇವರ ಚಿತ್ತಾನುಸಾರವಾಗಿ ನಾನು ಅಪೊಸ್ತಲನಾದೆನು. ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ಜನರಿಗೆ ತಿಳಿಯಪಡಿಸಲು ದೇವರು ನಮ್ಮನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೆಂಬ ನಾನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾವ್ಲು ಮನ್ತಲೊ ಮಿಯಾ ಲಿವ್ತಲಿ ಚಿಟ್ .ಅಮ್ಚ್ಯಾ ದೆವಾ ಅನಿ ಜಿವನಾಚೊ ಬರೊಸೊ ಹೊವ್ನ್ ಹೊತ್ತ್ಯಾ ಜೆಜು ಕ್ರಿಸ್ತಾಚ್ಯಾ ಹುಕುಮಾ ವೈನಾ ಮಿಯಾ ತೆಚೊ ಅಪೊಸ್ತಲ್ ಹೊವ್ನ್ ಹಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:1
29 ತಿಳಿವುಗಳ ಹೋಲಿಕೆ  

ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ,


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.


ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.


ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.


ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.


ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.


ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ.


ದೇವರ ಚಿತ್ತದಂತೆ ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪೌಲನೂ ಮತ್ತು ನಮ್ಮ ಸಹೋದರನಾದ ಸೊಸ್ಥೆನನೂ,


ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.


ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.


ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,


ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.


ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,


ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.


ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.


ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.


ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.


ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು