Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು; ಹಾಗೆಯೇ ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ನಿಜವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ಆ ವಿಧವಾದ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲೂ ನಿನ್ನ ತಾಯಿಯಾದ ಯೂನಿಕೆಯಲ್ಲೂ ಇತ್ತು. ಈಗ ಅದೇ ನಂಬಿಕೆಯು ನಿನ್ನಲ್ಲಿಯೂ ಇದೆಯೆಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನಿಕೆಯಲ್ಲಿಯೂ ಮೊದಲು ಇದ್ದ ನಂಬಿಕೆಯು ಈಗ ನಿನ್ನಲ್ಲಿಯೂ ಇದೆಯೆಂದು ನಾನು ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಜೊ ಖರೊ ವಿಶ್ವಾಸ್ ಲೈ ಘಟ್ ಮನ್ತಲೆ ಮಾಕಾ ಗೊತ್ತ್ ಹಾಯ್ ತುಮ್ಚ್ಯಾ ಅಜ್ಜಿಚೊ ಲುಯಿಸಾಚೊ ಅನಿ ತುಮ್ಚ್ಯಾ ಬಾಯ್ಚೊ ಯುನಿಸಾಚೊ ವಿಶ್ವಾಸ್‍ಬಿ ತಸೊಚ್ ಘಟ್ ಹೊತ್ತೊ. ತಸ್ಲೊಚ್ ತುಕಾಬಿ ಹಾಯ್ ಮನುನ್ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:5
25 ತಿಳಿವುಗಳ ಹೋಲಿಕೆ  

ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.


ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.


ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.


ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.


ಪ್ರಿಯರೇ, ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮರಾಗಿದ್ದೀರೆಂದು ನಂಬಿದ್ದೇವೆ.


ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ,


ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ,


ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು ಪೂರ್ಣದೃಢತೆಯುಳ್ಳವನಾದನು.


ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.


ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು.


ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.


ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.


ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.


ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.


ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.


ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು ನನ್ನ ಮನಸ್ಸಿನಲ್ಲಿ,


ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.


ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಅಂಜಿ ನಡುಗುವರು.


ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು