2 ತಿಮೊಥೆಯನಿಗೆ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
9 ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,
9 ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.
9 ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.
9 ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,
ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.
ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.
ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.
ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.
ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.
ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.