Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ನನ್ನಿಂದ ಅನೇಕ ಸಾಕ್ಷಿಗಳ ಮುಂದೆ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಉಪದೇಶಿಸಿದ ಸಂಗತಿಗಳನ್ನು ನೀನು ಕೇಳಿರುವೆ. ಅವುಗಳನ್ನು ಇತರ ಅನೇಕ ಜನರೂ ಕೇಳಿದ್ದಾರೆ. ನೀನು ಆ ಸಂಗತಿಗಳನ್ನು ಉಪದೇಶಿಸಬೇಕು. ನಿನಗೆ ನಂಬಿಗಸ್ತರಾದ ಕೆಲವರ ವಶಕ್ಕೆ ಆ ಉಪದೇಶಗಳನ್ನು ಕೊಡು. ಆಗ ಅವರು ಆ ಸಂಗತಿಗಳನ್ನು ಇತರರಿಗೆ ಉಪದೇಶಿಸಲು ಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನು ಇತರರಿಗೆ ಸಹ ಬೋಧಿಸಲು ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಾಜೆಕ್ನಾ ಆಯ್ಕಲ್ಲೆ ಶಿಕಾಪ್ ಘೆ ಅನಿ ಎಕ್ ಸಾಕ್ಷಿ ಸರ್ಕೆ ಲೊಕಾಂಚ್ಯಾ ಇದ್ರಾಕ್ ಸಾಂಗ್, ಅನಿ ಮಿಯಾ ಶಿಕ್ವುಲ್ಲಿ ಸಂಗ್ತಿಯಾ ತಿಯಾ ದುಸ್ರ್ಯಾಕ್ನಿ ಶಿಕ್ವು, ಅನಿ ವಿಶ್ವಾಸಾನ್ ಶಿಕ್ವು ಅನಿ ಜೆ ಕೊನಾಕ್ ದುಸ್ರ್ಯಾಕ್ನಿ ಶಿಕ್ವುತಲಿ ತಾಕತ್ ಹಾಯ್ ತೆಂಚ್ಯಾ ತಾಬೆತ್ ದಿ ಅನಿ ತೆನಿ ತ್ಯಾ ಗೊಸ್ಟಿಯಾ ಲೊಕಾಕ್ನಿ ಶಿಕ್ವುಂದಿತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:2
33 ತಿಳಿವುಗಳ ಹೋಲಿಕೆ  

ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.


ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;


ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ,


ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.


ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.


ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;


ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು.


ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.


ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.


ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.


ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು.


ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.


ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.


ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು.


ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.


ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.


ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.


ನನ್ನ ಸೇವಕನಾದ ಮೋಶೆಯು ಅಂಥವನಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.


ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.


ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು.


ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು