Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದರ ಮೂಲಕ ದೈವಭಕ್ತರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದರಿಂದ ದೇವರ ಮನುಷ್ಯನು ಪ್ರವೀಣನಾಗಿ ಸಕಲಸತ್ಕಾರ್ಯಕ್ಕೆ ಸನ್ನದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ದೇವರ ಸೇವಕರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆಚೆಸಾಟ್ನಿ ದೆವಾಚಿ ಸೆವಾ ಕರ್‍ತಲೊ ಮಾನುಸ್ ಸಗ್ಳ್ಯಾ ರಿತಿನ್ ಶಿಕಲ್ಲೊ ಅನಿ ಸಗ್ಳ್ಯಾ ರಿತಿಚಿ ಬರಿ ಕಾಮಾ ಕರ್‍ತಲ್ಯಾ ವಿಶಯಾತ್ ಗೊತ್ತ್ ಅಸಲ್ಲೊ ಹೊವ್ನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:17
12 ತಿಳಿವುಗಳ ಹೋಲಿಕೆ  

ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.


ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.


ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,


ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು