Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಅವರು ಹೆಚ್ಚು ಮುಂದುವರಿಯಲು ಸಾಧ್ಯವಿಲ್ಲ. ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪ್ರಕಟವಾಗಿ ಬಂದ ಹಾಗೆಯೇ ಇವರದೂ ಪ್ರಕಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದುರ್ಮತಿಗಳೂ ವಿಶ್ವಾಸಭ್ರಷ್ಟರೂ ಆಗಿದ್ದಾರೆ. ಆದರೆ ಅವರ ಮೂರ್ಖತನ ದೀರ್ಘಕಾಲ ಬಾಳದು. ಯನ್ನ ಮತ್ತು ಯಂಬ್ರಳ ದೋಷದಂತೆ ಅದು ಸರ್ವರಿಗೂ ಬಟ್ಟಬಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಅವರ ಪ್ರಯತ್ನವು ಇನ್ನು ಸಾಗುವದಿಲ್ಲ; ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದುಬಂದ ಪ್ರಕಾರ ಇವರದೂ ತಿಳಿದುಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರ ಕಾರ್ಯಗಳಲ್ಲಿ ಅವರಿಗೆ ಯಶಸ್ಸಾಗುವುದಿಲ್ಲ. ಅವರು ಮೂರ್ಖರೆಂಬುದು ಜನರೆಲ್ಲರಿಗೂ ಕಾಣುತ್ತದೆ. ಯನ್ನ, ಯಂಬ್ರರಿಗೆ ಹೀಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಇವರು ಇನ್ನು ಮುಂದುವರಿಯಲಾರರು. ಯನ್ನ, ಯಂಬ್ರರ ಮೂರ್ಖತನವು ಎಲ್ಲರಿಗೂ ಸ್ಪಷ್ಟವಾಗಿ ತಿಳಿದುಬಂದಂತೆಯೇ, ಇವರದೂ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ತೆಂಚೆ ಕಾಮ್ ಲೈ ದಿಸ್ ಚಲಿನಾ, ತ್ಯಾ ಜಾನ್ನೆಸ್ ಅನಿ ಜಾಂಬ್ರೆಸಾಚೆ ಪಿಸೆಪಾನ್ ಕಶೆ ಕಳುನ್ ಯೆಲೆ, ತಸೆಚ್ ಹೆಂಚೆ ಪಿಶೆಪಾನ್‍ಬಿ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:9
14 ತಿಳಿವುಗಳ ಹೋಲಿಕೆ  

ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.


ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.


ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.


ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.


ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರಕೊಟ್ಟನು.


ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.


ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು