Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಿಮ್ಮ ನಂಬಿಕೆಯು ಮತ್ತು ಇತರರ ಮೇಲೆ ನಿಮಗಿರುವ ಪ್ರೀತಿಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಿಮ್ಮ ವಿಷಯದಲ್ಲಿ ಸ್ತೋತ್ರ ಸಲ್ಲಿಸುವುದು ಯೋಗ್ಯವಾದ ಕಾರ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಅಮಿ ಸಗ್ಳ್ಯಾ ಎಳಾರ್ ದೆವಾಕ್ ಧನ್ಯವಾದ್ ದಿತಾಂವ್. ಅನಿ ಅಶೆ ಅಮಿ ಕರುಕುಚ್ ಪಾಜೆ. ಕಶ್ಯಾಕ್ ಮಟ್ಲ್ಯಾರ್, ತುಮ್ಚೊ ವಿಶ್ವಾಸ್ ವಾಡುನ್ಗೆತುಚ್ ಜಾವ್ಕ್ ಲಾಗ್ಲಾ, ಅನಿ ತುಮ್ಚ್ಯಾ ಎಕಾಮೆಕಾಂಚ್ಯಾ ಮದ್ದಿ ಹೊತ್ತೊ ಪ್ರೆಮ್ ಅನಿಉಲ್ಲೊ ಘಟ್ ಹೊವ್ನಗೆತುಚ್ ಜಾವ್ಕ್ ಲಾಗ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 1:3
26 ತಿಳಿವುಗಳ ಹೋಲಿಕೆ  

ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.


ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?


ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.


ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.


ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.


ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.


ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.


ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ.


ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು,


ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.


ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.


ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ನಾವು ಮಿತಿಗಳನ್ನು ಮೀರಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತೆಗೆದುಕೊಂಡು, ಇವು ನಮ್ಮವು ಎಂದು ಹಿಗ್ಗುವವರಲ್ಲ. ಆದರೆ ನಿಮ್ಮ ನಂಬಿಕೆಯು ಹೆಚ್ಚಿದಾಗೆಲ್ಲಾ ನಿಮ್ಮ ಮೂಲಕ ನಮ್ಮ ಮಿತಿಯು ಇನ್ನೂ ವಿಸ್ತರಿಸಿತು.


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು