Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಹೋದರರೇ, ನವ್ಮಿುಂದ ಹೊಂದಿದ ಬೋಧನೆಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಹೋದರ ಸಹೋದರಿಯರೇ, ಕೆಲಸ ಮಾಡದ ವಿಶ್ವಾಸಿಯಿಂದ ನೀವು ದೂರವಿರಬೇಕೆಂದು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಧಿಕಾರದಿಂದ ನಿಮಗೆ ಆಜ್ಞಾಪಿಸುತ್ತಿದ್ದೇವೆ. ನಾವು ನೀಡಿದ ಉಪದೇಶವನ್ನು ಅವರು ಅನುಸರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಮ್ಚ್ಯಾ ಭಾವಾ-ಭೆನಿಯಾನು, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ನಾವಾನ್ ಅಮಿ ತುಮ್ಕಾ ಸಾಂಗ್ತಾಂವ್, ಅಳ್ಸಿಪಾನಾಚೆ ಜಿವನ್ ಕರ್‍ತಲ್ಯಾ ಸಗ್ಳ್ಯಾ ಲೊಕಾನಿ ಅಮಿ ಸಾಂಗ್ತಲ್ಯಾ ಹ್ಯಾ ಗೊಸ್ಟಿಯಾ ಪಾಳುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:6
24 ತಿಳಿವುಗಳ ಹೋಲಿಕೆ  

ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.


ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.


ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.


ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.


ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ.


ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.


ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.


ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ


ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.


ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,


ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.


ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.


ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ.


ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು