2 ಪೂರ್ವಕಾಲ ವೃತ್ತಾಂತ 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ದೇವರು ಸೊಲೊಮೋನನಿಗೆ, “ನೀನು ಘನಧನೈಶ್ವರ್ಯಗಳನ್ನಾಗಲಿ, ಶತ್ರುಗಳ ವಿನಾಶವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳಲಿಲ್ಲ. ಬದಲಿಗೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ನಿನಗಾಗಿ ಬೇಡಿಕೊಂಡೆ. ಆದುದರಿಂದ ಅವು ನಿನಗೆ ದೊರಕುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ದೇವರು ಸೊಲೊಮೋನನಿಗೆ - ನೀನು ಘನಧನೈಶ್ವರ್ಯಗಳನ್ನಾಗಲಿ ವೈರಿಗಳ ಪ್ರಾಣಹರಣವನ್ನಾಗಲಿ ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳದೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವದಕ್ಕೋಸ್ಕರ ಜ್ಞಾನವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ಬೇಡಿಕೊಂಡದರಿಂದ ಅವು ನಿನಗೆ ದೊರಕುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ದೇವರು ಸೊಲೊಮೋನನಿಗೆ, “ನಿನ್ನ ಕೋರಿಕೆ ಒಳ್ಳೆಯದಾಗಿದೆ. ನೀನು ಐಶ್ವರ್ಯವನ್ನಾಗಲಿ ಗೌರವವನ್ನಾಗಲಿ ಬೆಳ್ಳಿಬಂಗಾರಗಳನ್ನಾಗಲಿ ಕೇಳಲಿಲ್ಲ. ನಿನ್ನ ವೈರಿಗಳನ್ನು ನಿರ್ಮೂಲ ಮಾಡುವಂತಾಗಲಿ ಅಥವಾ ನಿನಗೆ ದೀರ್ಘಾಯುಷ್ಯವನ್ನು ಕೊಡು ಎಂದಾಗಲಿ ನೀನು ಕೇಳಿಕೊಳ್ಳದೆ ರಾಜ್ಯವನ್ನು ನ್ಯಾಯವಾಗಿ ಆಳಲು ಬೇಕಾದ ಜ್ಞಾನವಿವೇಕಗಳನ್ನು ಕೇಳಿಕೊಂಡೆ. ನಾನು ಆರಿಸಿಕೊಂಡಿರುವ ಜನಾಂಗದ ಮೇಲೆ ಆಡಳಿತ ನಡಿಸುವಾಗ ಯೋಗ್ಯವಾದ ಸಲಹೆ ಕೊಡುವಂತೆ ಜ್ಞಾನವನ್ನು ಕೇಳಿರುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಹೃದಯದಲ್ಲಿ ಇದ್ದುದರಿಂದಲೂ ನೀನು ಐಶ್ವರ್ಯವನ್ನೂ, ಸ್ಥಿತಿಯನ್ನೂ, ಘನವನ್ನೂ, ನಿನ್ನ ಶತ್ರುಗಳ ಪ್ರಾಣವನ್ನೂ ಕೇಳದೆ ಮತ್ತು ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ, ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ, ಆ ನನ್ನ ಜನರಿಗೆ ನೀನು ನ್ಯಾಯತೀರಿಸುವ ಹಾಗೆ, ಜ್ಞಾನವನ್ನೂ, ತಿಳುವಳಿಕೆಯನ್ನೂ ನೀನು ಕೇಳಿದ್ದರಿಂದಲೂ; ಅಧ್ಯಾಯವನ್ನು ನೋಡಿ |