2 ಪೂರ್ವಕಾಲ ವೃತ್ತಾಂತ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಸಾವಿರದ ನಾನೂರು ರಥಗಳೂ ಮತ್ತು ಹನ್ನೆರಡು ಸಾವಿರ ರಾಹುತರೂ ಅವನಿಗೆ ಇದ್ದರು. ಇವರನ್ನು ರಥದ ಪಟ್ಟಣಗಳಲ್ಲಿಯೂ ಕೆಲವರನ್ನು ಯೆರೂಸಲೇಮಿನಲ್ಲಿ ಅರಸನೊಂದಿಗೂ ಇರಿಸಿದನು. ಉಳಿದವುಗಳನ್ನು ರಥಗಳಿಗಾಗಿ ನೇಮಿಸಿದ ಪಟ್ಟಣದಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಅವನಿಗಿದ್ದ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಜೆರುಸಲೇಮಿನಲ್ಲೇ ಇಟ್ಟುಕೊಂಡನು. ಉಳಿದವುಗಳನ್ನು ರಥಗಳಿಗಾಗಿಯೇ ನೇಮಿಸಿದ್ದ ಪಟ್ಟಣಗಳಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು, ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇವಿುನಲ್ಲಿಟ್ಟುಕೊಂಡು ಉಳಿದವುಗಳನ್ನು ರಥಗಳಿಗೋಸ್ಕರ ನೇವಿುಸಿದ ಪಟ್ಟಣಗಳಲ್ಲಿರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸೊಲೊಮೋನನು ಕುದುರೆಗಳನ್ನೂ ರಥಗಳನ್ನೂ ಸಂಗ್ರಹಿಸಲು ಪ್ರಾರಂಭಿಸಿ ಒಂದು ಸಾವಿರದ ನಾನೂರು ರಥಗಳನ್ನೂ ಹನ್ನೆರಡು ಸಾವಿರ ರಾಹುತರನ್ನೂ ತನ್ನ ಸೈನ್ಯಕ್ಕೆ ಕೂಡಿಸಿಕೊಂಡನು. ಅವುಗಳನ್ನು ರಥಗಳನ್ನಿಡುವ ನಗರಗಳಲ್ಲಿ ಇರಿಸಿದನು. ಅದರಲ್ಲಿ ಕೆಲವನ್ನು ತನ್ನ ಅರಮನೆಯಿರುವ ಜೆರುಸಲೇಮಿನಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು. ಅಧ್ಯಾಯವನ್ನು ನೋಡಿ |