Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನ ದಾಸನಾದ ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ದೇವದರ್ಶನದ ಗುಡಾರ ಅಲ್ಲಿಯೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿದ್ದ ಪೂಜಾಸ್ಥಳಕ್ಕೆ ಹೋದನು. ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿಸಿದ ದೇವದರ್ಶನದ ಗುಡಾರವು ಅಲ್ಲಿತ್ತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗೆ ಅವನೂ, ಅವನ ಸಂಗಡ ಸಮಸ್ತ ಸಮೂಹವೂ ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಯೆಹೋವ ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಮಾಡಿದ ದೇವದರ್ಶನ ಗುಡಾರವು ಅಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:3
12 ತಿಳಿವುಗಳ ಹೋಲಿಕೆ  

ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು.


ಯಾಜಕನಾದ ಚಾದೋಕನನ್ನೂ, ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.


ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.


ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.


“ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು.


ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.


ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು.


ಆನಂತರ ಸೊಲೊಮೋನನು ದೇವದರ್ಶನದ ಗುಡಾರವನ್ನು ಬಿಟ್ಟು, ಗಿಬ್ಯೋನಿನಲ್ಲಿರುವ ಪೂಜಾಸ್ಥಳದಿಂದ ಯೆರೂಸಲೇಮಿಗೆ ಬಂದು, ಇಸ್ರಾಯೇಲ್ ರಾಜ್ಯವನ್ನು ಆಳಿದನು.


ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು