2 ಪೂರ್ವಕಾಲ ವೃತ್ತಾಂತ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಲ್ಲದೆ ಹೂರನ ಮಗನಾದ ಊರಿಯ, ಈತನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೂ ಊರೀಯನ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿಸಿದ್ದ ತಾಮ್ರದ ಬಲಿಪೀಠ, ಅಲ್ಲೇ ಗಿಬ್ಯೋನಿನಲ್ಲಿ ಸರ್ವೇಶ್ವರನ ಗುಡಾರದ ಮುಂದೆ ಇತ್ತು. ಈ ಕಾರಣ ಸೊಲೊಮೋನನೂ ಅವನ ಸಮಾಜದವರೂ ಅಲ್ಲಿಗೆ ದರ್ಶನಕ್ಕಾಗಿ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಊರೀಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿದ ತಾಮ್ರಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಆ ವೇದಿಗಾಗಿಯೇ ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಊರೀಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಕೆಯು ಗಿಬ್ಯೋನಿನಲ್ಲಿದ್ದ ಪವಿತ್ರ ಗುಡಾರದ ಮುಂದೆ ಇಡಲ್ಪಟ್ಟಿತ್ತು. ಆದ್ದರಿಂದ ಸೊಲೊಮೋನನೂ ಇಸ್ರೇಲರೂ ಗಿಬ್ಯೋನಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಊರಿಯನ ಮಗ, ಹೂರನ ಮೊಮ್ಮಗನಾದ ಬೆಚಲಯೇಲನು ಮಾಡಿದ ಕಂಚಿನ ಬಲಿಪೀಠವು ಗಿಬ್ಯೋನಿನಲ್ಲಿ ಯೆಹೋವ ದೇವರ ಗುಡಾರದ ಮುಂದೆ ಇತ್ತು. ಅಲ್ಲಿ ಸೊಲೊಮೋನನೂ, ಸಭೆಯೂ ದೇವರ ಇಚ್ಛೆಯನ್ನು ವಿಚಾರಿಸಿದರು. ಅಧ್ಯಾಯವನ್ನು ನೋಡಿ |