2 ಪೂರ್ವಕಾಲ ವೃತ್ತಾಂತ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸೊಲೊಮೋನನು, ದೇವದರ್ಶನದ ಗುಡಾರದ ಬಳಿ ಸರ್ವೇಶ್ವರನ ಮುಂದಿದ್ದ ಆ ತಾಮ್ರದ ಪೀಠದ ಮೇಲೆ, ಸಾವಿರ ದಹನಬಲಿಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸೊಲೊಮೋನನು ದೇವದರ್ಶನದ ಗುಡಾರದ ಬಳಿಯಲ್ಲಿ ಯೆಹೋವನ ಮುಂದಿದ್ದ ಆ ತಾಮ್ರವೇದಿಯ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವದರ್ಶನ ಗುಡಾರದ ಮುಂಭಾಗದಲ್ಲಿದ್ದ ತಾಮ್ರದ ಯಜ್ಞವೇದಿಕೆಯ ಬಳಿಗೆ ಸೊಲೊಮೋನನು ಹೋಗಿ ಅದರ ಮೇಲೆ ಒಂದು ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಯೆಹೋವ ದೇವರ ಮುಂದೆ ಇರುವ ಕಂಚಿನ ಪೀಠದ ಬಳಿಗೆ ಹೋಗಿ, ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿ |
ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿನದ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು.