Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನೂ ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ - ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರು ಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೌವನಸ್ಥರು ಹೇಳಿದ ಪ್ರಕಾರ ರೆಹಬ್ಬಾಮನು ಅವರಿಗೆ, “ನನ್ನ ತಂದೆಯು ನಿಮಗೆ ಭಾರವಾದ ನೊಗವನ್ನು ಹೊರಿಸಿದನು. ನಾನಾದರೋ ಅದನ್ನು ಇನ್ನೂ ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಹೊಡೆದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಹೊಡೆಯುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು; ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:14
15 ತಿಳಿವುಗಳ ಹೋಲಿಕೆ  

ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.


ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.


ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!


ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ.


ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ.


ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು.


ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು.


ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು.


ಅರಸನಾದ ರೆಹಬ್ಬಾಮನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.


ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು