Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಅರಸನಾದ ಸೊಲೊಮೋನನಿಂದ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿ ಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿದೊಡನೆ ಐಗುಪ್ತದಿಂದ ಹಿಂತಿರುಗಿ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇತ್ತ ಅರಸ ಸೊಲೊಮೋನನಿಗೆ ತಪ್ಪಿಸಿಕೊಂಡು ಈಜಿಪ್ಟಿಗೆ ಓಡಿಹೋಗಿದ್ದ ನೆಬಾಟನ ಮಗ ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿದೊಡನೆ ಈಜಿಪ್ಟಿನಿಂದ ಹಿಂದಿರುಗಿ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿದೊಡನೆ ಐಗುಪ್ತದಿಂದ ಹಿಂದಿರುಗಿ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾರೊಬ್ಬಾಮನು ರಾಜನಾದ ಸೊಲೊಮೋನನ ಬಳಿಯಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸಿಸುತ್ತಿದ್ದನು. ಅವನು ನೆಬಾಟನ ಮಗನು. ರೆಹಬ್ಬಾಮನು ರಾಜನಾದನೆಂಬ ಸುದ್ದಿ ತಿಳಿದಕೂಡಲೇ ಅವನು ಈಜಿಪ್ಟಿನಿಂದ ಹಿಂತಿರುಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸವಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ಇದನ್ನು ಕೇಳಿದಾಗ, ಅವನು ಈಜಿಪ್ಟಿನಿಂದ ತಿರುಗಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:2
6 ತಿಳಿವುಗಳ ಹೋಲಿಕೆ  

ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಐಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವ ವರೆಗೆ ಅಲ್ಲಿಯೇ ಇದ್ದನು.


ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನನ್ನು ಇದನ್ನು ಕೇಳಿ ಕರೆಯಿಸಿಕೊಂಡಿದ್ದರು.


ಯೌವನಸ್ಥನಾದ ಯಾರೊಬ್ಬಾಮನು ಬಹು ಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಯೋಸೇಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.


ಅರಸನಾದ ಸೊಲೊಮೋನನಿಗೆ ವಿರುದ್ಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯೀಮ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನೆಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆಯು ಅವನ ತಾಯಿ.


ಇಸ್ರಾಯೇಲರು ಅವನನ್ನೂ ತಮ್ಮ ಬಳಿಗೆ ಕರೆಸಿಕೊಂಡರು. ಯಾರೊಬ್ಬಾಮನು ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,


ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆಯ ಗ್ರಂಥ, ಹಾಗೂ ದಿವ್ಯದಾರ್ಶಿಕನಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು