2 ಪೂರ್ವಕಾಲ ವೃತ್ತಾಂತ 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೊರೆಯನ್ನು ಹೊರಿಸಿದ್ದನು; ನಿನ್ನ ತಂದೆಯು ನೇಮಿಸಿದ ಬಿಟ್ಟಿ ಕೆಲಸವನ್ನು ನೀನು ಕಡಿಮೆ ಮಾಡಿ, ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ, ನಾವು ನಿನ್ನನ್ನು ಸೇವಿಸುವೆವು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನಿಮ್ಮ ತಂದೆ ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದ್ದರು; ಅವರು ನೇಮಿಸಿದ್ದ ಬಿಟ್ಟೀ ಕೆಲಸವನ್ನು ನೀನು ಕಡಿಮೆಮಾಡಿ, ನಮ್ಮ ಮೇಲಿರುವ ಈ ಭಾರವಾದ ನೊಗವನ್ನು ಹಗುರಮಾಡುವುದಾದರೆ ನಾವು ನಿಮಗೆ ಸೇವೆಮಾಡುತ್ತೇವೆ,” ಎಂದನು. ಅವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನಿಗೆ ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು; ನಿನ್ನ ತಂದೆಯು ನೇವಿುಸಿದ ಬಿಟ್ಟೀ ಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರಮಾಡುವದಾದರೆ ನಾವು ನಿನ್ನನ್ನು ಸೇವಿಸುವೆವು ಎಂದು ಹೇಳಲು ಅವನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ರೆಹಬ್ಬಾಮನೇ, ನಿನ್ನ ತಂದೆಯು ನಮ್ಮ ಮೇಲೆ ತುಂಬ ಭಾರವಾದ ನೊಗವನ್ನು ಹೊರಿಸಿದ್ದನು. ಆ ಭಾರವನ್ನು ನೀನು ಕಡಿಮೆ ಮಾಡಬೇಕು. ಆಗ ನಾವು ನಿನ್ನ ಸೇವೆಮಾಡುವೆವು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ನಿನ್ನ ತಂದೆಯು ನಮ್ಮ ನೊಗವನ್ನು ಭಾರವಾಗಿ ಮಾಡಿದನು. ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ, ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ, ನಾವು ನಿನಗೆ ಸೇವೆಮಾಡುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿ |