2 ಪೂರ್ವಕಾಲ ವೃತ್ತಾಂತ 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ರೆಹಬ್ಬಾಮನು ಜೆರುಸಲೇಮನ್ನು ಮುಟ್ಟಿದ ನಂತರ ಇಸ್ರಯೇಲರಿಗೆ ವಿರುದ್ಧ ಯುದ್ಧಮಾಡುವುದಕ್ಕೂ ಅವರ ರಾಜ್ಯವನ್ನು ಮರಳಿ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಮಂದಿ ಶ್ರೇಷ್ಟ ಸೈನಿಕರನ್ನು ಕೂಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ರೆಹಬ್ಬಾಮನು ಯೆರೂಸಲೇಮನ್ನು ಮುಟ್ಟಿದ ನಂತರ ಇಸ್ರಾಯೇಲ್ಯರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೂ ರಾಜ್ಯವನ್ನು ತಿರಿಗಿ ತನ್ನ ವಶಪಡಿಸಿಕೊಳ್ಳುವದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ರೆಹಬ್ಬಾಮನು ಜೆರುಸಲೇಮಿಗೆ ಬಂದು ಯೆಹೂದ ಮತ್ತು ಬೆನ್ಯಾಮೀನ್ ಕುಲದ ಒಂದು ಲಕ್ಷ ಎಂಭತ್ತುಸಾವಿರ ಮಂದಿ ನುರಿತ ಸೈನಿಕರನ್ನು ಒಟ್ಟು ಸೇರಿಸಿದನು. ಇಸ್ರೇಲರೊಂದಿಗೆ ಯುದ್ಧಮಾಡಿ ಅವರ ರಾಜ್ಯವನ್ನು ಮತ್ತೆ ಪಡೆದುಕೊಳ್ಳಬೇಕೆಂಬುದೇ ಅವನ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು, ಯೆಹೂದ ಮತ್ತು ಬೆನ್ಯಾಮೀನವರ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು. ಅಧ್ಯಾಯವನ್ನು ನೋಡಿ |