Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚೊರ್ಗ, ಅಯ್ಯಾಲೋನ್, ಹೆಬ್ರೋನ್. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಜೇಕ, ಚೊರ್ಗ, ಅಯ್ಯಾಲೋನ್ ಹಾಗೂ ಹೆಬ್ರೋನ್. ಕೋಟೆಕೊತ್ತಲಗಳಿಂದ ಕೂಡಿದ್ದ ಈ ಪಟ್ಟಣಗಳು ಯೆಹೂದ-ಬೆನ್ಯಾಮೀನ್ ಕುಲ ಪ್ರಾಂತ್ಯಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅಜೇಕ, ಚೊರ್ಗ, ಅಯ್ಯಾಲೋನ್, ಹೆಬ್ರೋನ್ ಇವೇ. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಚೊರ್ಗ, ಅಯ್ಯಾಲೋನ್ ಮತ್ತು ಹೆಬ್ರೋನ್ ಎಂಬ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತದ ಪಟ್ಟಣಗಳನ್ನು ದುರಸ್ತಿಪಡಿಸಿ ಭದ್ರಪಡಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಚೊರ್ಗವನ್ನೂ, ಅಯ್ಯಾಲೋನನ್ನೂ, ಹೆಬ್ರೋನನ್ನೂ ಕಟ್ಟಿಸಿದನು. ಇವು ಯೆಹೂದದಲ್ಲಿಯೂ, ಬೆನ್ಯಾಮೀನರಲ್ಲಿಯೂ ಕೋಟೆಯುಳ್ಳ ಪಟ್ಟಣಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:10
14 ತಿಳಿವುಗಳ ಹೋಲಿಕೆ  

ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರ್ಷ ಆರು ತಿಂಗಳುಗಳು.


ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.


ಇಳಿಜಾರು ಪ್ರದೇಶದಲ್ಲಿ ಎಷ್ಟಾವೋಲ್, ಚೊರ್ಗಾ, ಅಶ್ನಾ


ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.


ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.


ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.


ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.


ಅನಂತರ ಯೆಹೋಶುವನೂ, ಇಸ್ರಾಯೇಲರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ


ಅವನು ಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸವನ್ನು ಸಂಗ್ರಹಿಸಿಟ್ಟನು. ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿಟ್ಟನು.


ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.


ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.


ಫಿಲಿಷ್ಟಿಯರು ಯೆಹೂದದ ತಗ್ಗಾದ ಪ್ರದೇಶದ ಮತ್ತು ದಕ್ಷಿಣಪ್ರಾಂತ್ಯದ ಪಟ್ಟಣಗಳ ಮೇಲೆ ಬಿದ್ದು ಬೇತ್‌ಷೆಮೆಷ್‌, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು