Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಲೇವಿಯರು ಯೆಹೋವನಿಗೆ ಯಾಜಕ ಸೇವೆ ಮಾಡದಂತೆ ಯಾರೊಬ್ಬಾಮನೂ ಮತ್ತು ಅವನ ಮಕ್ಕಳೂ ಅವರನ್ನು ಬಹಿಷ್ಕರಿಸಿದ್ದರಿಂದ ಲೇವಿಯರು ತಮ್ಮ ಹುಲ್ಲುಗಾವಲುಗಳಿದ್ದ ತಮ್ಮ ಆಸ್ತಿಗಳನ್ನು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಲೇವಿಯರು ಸರ್ವೇಶ್ವರನಿಗೆ ಯಾಜಕ ಸೇವೆಮಾಡದಂತೆ ಯಾರೊಬ್ಬಾಮನು ಮತ್ತು ಅವನ ಮಕ್ಕಳು ಅವರನ್ನು ಬಹಿಷ್ಕರಿಸಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಲೇವಿಯರು ಯೆಹೋವನಿಗೆ ಯಾಜಕಸೇವೆಮಾಡದಂತೆ ಯಾರೊಬ್ಬಾಮನೂ ಅವನ ಮಕ್ಕಳೂ ಅವರನ್ನು ತಳ್ಳಿಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಲೇವಿಯರು ತಮಗಿದ್ದ ಗೊಮಾಳಗಳನ್ನೂ ಹೊಲಗದ್ದೆಗಳನ್ನೂ ಬಿಟ್ಟು ಯೆಹೂದಕ್ಕೂ ಮತ್ತು ಜೆರುಸಲೇಮಿಗೂ ಬಂದರು. ಯಾಜಕರಾಗಿ ಸೇವೆಮಾಡಲು ಯಾರೊಬ್ಬಾಮನು ಮತ್ತು ಅವನ ಮಕ್ಕಳು ಲೇವಿಯರಿಗೆ ಅನುಮತಿ ಕೊಡಲಿಲ್ಲವಾದ್ದರಿಂದ ಲೇವಿಯರು ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಲೇವಿಯರು ತಮ್ಮ ಹುಲ್ಲುಗಾವಲು ಮತ್ತು ಆಸ್ತಿಯನ್ನು ತ್ಯಜಿಸಿ ಯೆಹೂದ ಮತ್ತು ಯೆರೂಸಲೇಮಿಗೆ ಬಂದರು, ಏಕೆಂದರೆ ಯಾರೊಬ್ಬಾಮನೂ ಅವನ ಮಕ್ಕಳು ಯೆಹೋವ ದೇವರಿಗೆ ಯಾಜಕ ಸೇವೆ ಮಾಡದ ಹಾಗೆ ತಿರಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:14
10 ತಿಳಿವುಗಳ ಹೋಲಿಕೆ  

ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ, ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.


ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.


ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರೂ ಮತ್ತು ಲೇವಿಯರೂ ಅವನೊಡನೆ ಬಂದು ಸೇರಿಕೊಂಡರು.


ಇಸ್ರಾಯೇಲರ ಸ್ವತ್ತಿನಲ್ಲಿ ಆಯಾ ಕುಲದ ಸ್ವತ್ತಿನ ಪ್ರಮಾಣಕ್ಕೆ ತಕ್ಕ ಹಾಗೆ ಹೆಚ್ಚಾದ ಜನರುಳ್ಳವರಿಂದ ಹೆಚ್ಚಾಗಿಯೂ, ಕಡಿಮೆಯಾದ ಜನರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು