Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಸ್ರಯೇಲರ ಎಲ್ಲ ಕುಲಗಳಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಜೆರುಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಸ್ರಾಯೇಲ್ಯರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ದರ್ಶನವನ್ನು ಬಯಸುವವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ಯಜ್ಞವರ್ಪಿಸುವದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇವಿುಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕುವ ಮನಸ್ಸು ಮಾಡಿದ ಇಸ್ರಾಯೇಲಿನ ಪ್ರತಿಯೊಂದು ಕುಲಗಳಿಂದ ಕೆಲವರು ತಮ್ಮ ಪೂರ್ವಜರ ದೇವರಾದ ಯೆಹೋವ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:16
28 ತಿಳಿವುಗಳ ಹೋಲಿಕೆ  

ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.


ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.


ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.


ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ!


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ, ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವುದಾದರೆ,


ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.


ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.


ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.


ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿರುವ ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.


ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ, ಅವರು ತಮ್ಮ ಆಳುಗಳನ್ನೂ, ಪಶುಗಳನ್ನೂ ಹೊಲದಲ್ಲಿಯೇ ಬಿಟ್ಟರು.


ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.


ಇವರೆಲ್ಲರೂ ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗು ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಅಂತೆಯೇ ಯೆಹೂದ ರಾಜ್ಯವು ಆ ವರ್ಷಗಳಲ್ಲಿ ಅಭಿವೃದ್ಧಿಯಾಗಿ, ಸೊಲೊಮೋನನ ಮಗನಾದ ರೆಹಬ್ಬಾಮನು ಬಲಗೊಂಡನು.


ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.


ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.


ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.


ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.


ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.


ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು