ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ಒಡೆಯಾ, ಕೇಳು ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ, ಅಂದರೆ ಯೆಷಿಮೋನಿನ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.
ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಅನಂತರ ಜೀಫ್ ಅರಣ್ಯದ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ಪ್ರತಿದಿನ ಅವನನ್ನು ಹುಡುಕುತ್ತಿದ್ದರೂ ದೇವರು ಅವನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.
ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.
ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.
ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.