Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೂದ ದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಯೆರೂಸಲೇಮನ್ನು ಸಮೀಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜುದೇಯ ನಾಡಿನ ಕೋಟೆಕೊತ್ತಲುಗಳಿಂದ ಕೂಡಿದ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಜೆರುಸಲೇಮನ್ನು ಸಮೀಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೂದದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನ ಮಾಡಿಕೊಂಡನಂತರ ಯೆರೂಸಲೇಮನ್ನು ಸಮೀಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಶೀಶಕನು ಯೆಹೂದ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಂಡು ಜೆರುಸಲೇಮಿನತ್ತ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:4
7 ತಿಳಿವುಗಳ ಹೋಲಿಕೆ  

“ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದೊಳಗೆ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.


ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ, ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕೆಡವಲಾರೆನೋ?” ಎಂಬುದೇ.


ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”


ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.


ಎಷ್ಟೆಂದರೆ - 3,37,500 ಆಡುಕುರಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು