Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚುಹಾಕುವುದಕ್ಕಾಗಿ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಶತ್ರುಸೈನ್ಯ ಯೆಹೂದ್ಯರ ಮುಂದೆಯೂ ಹೊಂಚುಹಾಕುವವರು ಅವರ ಹಿಂದೆಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚುಹಾಕುವದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವವರು ಅವರ ಹಿಂದೆಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಯಾರೊಬ್ಬಾಮನು ತನ್ನ ಸೈನ್ಯದ ಒಂದು ಭಾಗವನ್ನು ಅಬೀಯನ ಸೈನ್ಯದ ಹಿಂಭಾಗಕ್ಕೆ ಅವನಿಗೆ ಗೊತ್ತಿಲ್ಲದಂತೆ ಕಳುಹಿಸಿದನು. ಯಾರೊಬ್ಬಾಮನ ಸೈನ್ಯವು ಅಬೀಯನ ಸೈನ್ಯಕ್ಕೆ ಎದುರಾಗಿತ್ತು. ಅಬೀಯನ ಹಿಂದೆ ಯಾರೊಬ್ಬಾಮನ ಸೈನ್ಯವು ಅಡಗಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆ ಬರಮಾಡಿದನು. ಆದ್ದರಿಂದ ಇಸ್ರಾಯೇಲರು ಯೆಹೂದದವರ ಮುಂದೆಯೂ, ಅವರ ಹಿಂದೆಯೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:13
6 ತಿಳಿವುಗಳ ಹೋಲಿಕೆ  

ಅವರು ಹೊಂಚುಹಾಕುವುದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು.


“ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.


ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು