ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.
ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶದೆತ್ತರಕ್ಕೆ ಏರಿಹೋಗುವುದನ್ನು ಕಂಡು ಯಾವ ಮಾರ್ಗದಿಂದಲೂ ತಪ್ಪಿಸಿಕೊಳ್ಳಲಾರದೆ ಇದ್ದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.
ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.
ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.
ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.