ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.
ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.
ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.