Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಬೀಯನ ಸೈನಿಕರು ಯಾರೊಬ್ಬಾಮನ ಸೈನಿಕರನ್ನು ಓಡಿಸಿದರು. ಮತ್ತು ಅವರ ಪಟ್ಟಣಗಳಾದ ಬೇತೇಲ್, ಯೆಷಾನಾ ಮತ್ತು ಎಪ್ರೋನ್‌ಗಳನ್ನು ವಶಪಡಿಸಿಕೊಂಡರು. ಈ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿದ್ದ ಹಳ್ಳಿಗಳನ್ನೂ ವಶಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ, ಅವುಗಳ ಗ್ರಾಮಗಳನ್ನೂ ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:19
11 ತಿಳಿವುಗಳ ಹೋಲಿಕೆ  

ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.


ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.


ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.


ಇಸ್ರಾಯೇಲರ ಭಟರು ಸೋತುಹೋದರು. ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.


ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.


ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.


ಅವರನ್ನು ಅವರ ಪಟ್ಟಣಗಳಲ್ಲಿ ಸೇರುವುದಕ್ಕೆ ಬಿಡಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ?” ಎಂದನು.


ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.


ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು.


ಇದಲ್ಲದೆ ಅವನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಜ್” ಎಂದು ಹೆಸರಿತ್ತು.


ಅವನು ಯೆಹೂದದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ರ ಪಟ್ಟಣಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು