2 ಪೂರ್ವಕಾಲ ವೃತ್ತಾಂತ 13:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮುರಿಯಲಾಗದ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಯೇಲರ ಮೇಲೆ ಸರ್ವೇಶ್ವರ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾರೆಂದು ನಿಮಗೆ ಗೊತ್ತಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲ್ಯರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇಸ್ರೇಲರ ದೇವರಾದ ಯೆಹೋವನು ದಾವೀದನಿಗೂ ಅವನ ಗಂಡುಮಕ್ಕಳಿಗೂ ನಿರಂತರವಾಗಿ ಇಸ್ರೇಲನ್ನು ಆಳಲು ಉಪ್ಪಿನ ಒಡಂಬಡಿಕೆಯ ಮೂಲಕ ಅಧಿಕಾರ ಕೊಟ್ಟಿದ್ದಾನೆಂದು ನಿಮಗೆ ತಿಳಿದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀದನಿಗೂ, ಅವನ ವಂಶದವರಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟರೆಂದು ನಿಮಗೆ ಗೊತ್ತಿಲ್ಲವೋ. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.