2 ಪೂರ್ವಕಾಲ ವೃತ್ತಾಂತ 14:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಲ್ಲದೆ ಯೆಹೋವನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಿಂದ ಅವರಿಗೆ ದೊಡ್ಡ ಕೊಳ್ಳೆ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇದಲ್ಲದೆ ಸರ್ವೇಶ್ವರನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲೂ ದೊಡ್ಡ ಕೊಳ್ಳೆ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದಲ್ಲದೆ ಅವರು ಯೆಹೋವನ ಭಯಕ್ಕೆ ಒಳಗಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ವಶಮಾಡಿಕೊಂಡು ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲಿ ದೊಡ್ಡ ಕೊಳ್ಳೆ ಸಿಕ್ಕಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಸನು ತನ್ನ ಸೈನ್ಯದೊಡನೆ ಗೆರಾರಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿಬಿಟ್ಟನು. ಅವುಗಳಲ್ಲಿ ವಾಸಿಸುವ ಜನರು ಯೆಹೋವನಿಗೆ ಭಯಪಟ್ಟರು. ಆ ಪಟ್ಟಣಗಳಲ್ಲಿ ಇದ್ದ ನಿಕ್ಷೇಪಗಳನ್ನು ಆಸನ ಸೈನಿಕರು ದೋಚಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇದಲ್ಲದೆ ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ವಶಪಡಿಸಿಕೊಂಡರು. ಯೆಹೋವ ದೇವರ ಭಯವು ಅವರ ಮೇಲೆ ಇತ್ತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದುದರಿಂದ, ಅವುಗಳನ್ನೆಲ್ಲಾ ವಶಪಡಿಸಿಕೊಂಡರು. ಅಧ್ಯಾಯವನ್ನು ನೋಡಿ |