Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿಸಿದನು. ಕಲ್ಲುಕಂಬಗಳನ್ನು ಒಡೆದು ಹಾಕಿಸಿದನು. ಅಶೇರ ವಿಗ್ರಹಸ್ತಂಭಗಳನ್ನು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡಿಸಿ ಅಶೇರವಿಗ್ರಹಸ್ತಂಭಗಳನ್ನು ಕಡಿಸಿಬಿಟ್ಟು ಯೆಹೂದ್ಯರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೂರ್ತಿಪೂಜೆಗಾಗಿ ಮಾಡಿದ ಯಜ್ಞವೇದಿಕೆಗಳನ್ನು ತೆಗೆದುಹಾಕಿಸಿದನು. ವಿಗ್ರಹಾರಾಧಕರ ಪೂಜಾಸ್ಥಳಗಳನ್ನು, ಸ್ಮಾರಕಕಲ್ಲುಗಳನ್ನು ಒಡೆದು ಹಾಳುಮಾಡಿಸಿದನು. ಅಶೇರಸ್ತಂಭಗಳನ್ನು ತುಂಡು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:3
17 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.


ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.


ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.


ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.


ಯೆಹೂದ್ಯರಿಗೆ, “ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರದ ವಿಧಿಗಳನ್ನು ಕೈಕೊಳ್ಳಿರಿ” ಎಂದು ಆಜ್ಞಾಪಿಸಿದನು.


ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.


ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು